ಸ್ಮಾರ್ಟ್ ಸಿಟಿಯಲ್ಲಿ ಅಗ್ಲಿ ಗುಂಡಿ-ಬೈಕ್‌ ನೊಂದಿಗೆ ಹೊಂಡಕ್ಕೆ ಬಿದ್ದ ಯುವಕ-ಎಚ್ಚೆತ್ತುಕೊಳ್ಳದ ಪಾಲಿಕೆ-ಗಮನಹರಿಸುವಂತೆ ಸ್ಥಳೀಯರ ಕೋರಿಕೆ

ಮಂಗಳೂರು: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೇಬಲ್ ಅಳವಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ.

ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ರೋಡ್ ಗಳು ಸ್ಮಾರ್ಟ್ ಆದರೂ ಇನ್ನೂ ಕಾಂಕ್ರಿಟ್ ರಸ್ತೆ ಅಗೆದು ಕೇಬಲ್ ಆಳವಡಿಸುವ ಕಾರ್ಯ ನಡೆಯುತ್ತಲೇ ಇದೆ. ಮೆಸ್ಕಾಂನಿಂದ ಭೂಗತ ಕೇಬಲ್ ಅಳವಡಿಸುವ ಕಾರ್ಯ ನಗರಾದ್ಯಂತ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ರಸ್ತೆಗಳನ್ನು ಅಗೆದು ಯಾವುದೇ ಸೂಚನಾ ಫಲಕ ಮತ್ತು ಸುರಕ್ಷತಾ ಸಲಕರಣೆಗಳನ್ನಿಡದೆ ಹಾಗೇ ಬಿಡಲಾಗಿದೆ.

ಮಂಗಳೂರಿನ ಸಿಟಿ ಸೆಂಟರ್ ಬಳಿಯಲ್ಲಿ ಮೆಸ್ಕಾಂ ತೋಡಿದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದಿದ್ದಾನೆ. ಅದೃಷ್ಠವಶಾತ್ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ನಗರದ ಜನನಿಬಿಡ ರಸ್ತೆಯಲ್ಲೇ ಈ ರೀತಿ ಅವೈಜ್ಞಾನಿಕವಾಗಿ ಗುಂಡಿ ತೋಡಿದ್ದು, ರಾತ್ರಿ ಸರಿಯಾಗಿ ಕಾಣದೆ ಇನ್ನಷ್ಟು ವಾಹನ ಸವಾರರು ಹೊಂಡಕ್ಕೆ ಬೀಳುವ ಸಾಧ್ಯತೆ ಇದ್ದು ಸಂಬಂಧಪಟ್ಟವರು ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

LEAVE A REPLY

Please enter your comment!
Please enter your name here