ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

ಮಂಗಳೂರು(ಬೆಂಗಳೂರು): ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಕ ಮಾಡಲಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

 

LEAVE A REPLY

Please enter your comment!
Please enter your name here