ಗ್ಯಾಸ್‌ ಸೋರಿಕೆ- ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು

ಮಂಗಳೂರು(ಬೆಂಗಳೂರು): ಗ್ಯಾಸ್ ಸೋರಿಕೆಯಾಗಿ ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಡಿ.25ರ ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷಾನಿಲದಿಂದ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಆಕೆ ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಮನೆಯವರು ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್‌ ರೂಮ್‌ ಬಾಗಿಲು ಒಡೆದಿದ್ದು ರಾಜೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆದಾಗಲೇ ರಾಜೇಶ್ವರಿ ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here