2ನೇ ಹಂತದ ಭಾರತ್ ಜೋಡೋ ಯಾತ್ರೆ-ರಾಹುಲ್‌ಗೆ ಸಹೋದರಿ ಪ್ರಿಯಾಂಕಾ ವಾದ್ರಾ ಸಾಥ್

ಮಂಗಳೂರು(ಬೆಂಗಳೂರು): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ 2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದು, ಈ ಬಾರಿ ರಾಹುಲ್ ಜೊತೆ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಹೆಜ್ಜೆ ಹಾಕುವ ಸಾಧ್ಯತೆ ಇದೆ.

ಕನ್ಯಾಕುಮಾರಿಯಿಂದ ಶ್ರೀನಗರದ ತನಕ 150 ದಿನಗಳ ಕಾಲ ಭಾರತ್ ಜೋಡೋ ಯಾತ್ರೆ ನಡೆಸಿ ಅಭೂತಪೂರ್ವ ಯಶಸ್ಸು ಕಂಡ ಬೆನ್ನಲ್ಲೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜನವರಿಯಿಂದ ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಲು ಸಜ್ಜಾಗಿದ್ದಾರೆ. ಲೋಕಸಭಾ ಚುನಾವಣೆ ಸಮೀಸುತ್ತಿರುವ ಬೆನ್ನಲ್ಲೇ ರಾಹುಲ್ ಎರಡನೇ ಹಂತದ ಭಾರತ ಜೋಡೋ ಯಾತ್ರೆಗೆ ಕೈಗೊಳ್ಳಲು ಮುಂದಾಗಿದ್ದಾರೆ. ಯಾತ್ರೆಯ 2ನೇ ಹಂತ ಆರಂಭವಾಗುತ್ತಿದ್ದು, ಭಾರತ್ ಜೋಡೋ ಯಾತ್ರೆ ಪೂರ್ವದಿಂದ ಪಶ್ವಿಮ ಭಾಗದವರೆಗೆ ನಡೆಯಲಿದ್ದು ಯಾತ್ರೆಯ ಸ್ಥಳ, ದಿನಾಂಕ, ಮಾರ್ಗ ಸೇರಿದಂತೆ ಮತ್ತಿತರ ವಿಷಯಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here