ಮಂಗಳೂರು(ಕತಾರ್): ದಹ್ರಾ ಗ್ಲೋಬಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಬೇಹುಗಾರಿಕೆ ಆರೋಪ ಹಿನ್ನೆಲೆಯಲ್ಲಿ ನೀಡಿದ್ದ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿರುವ ಕತಾರ್ ನ್ಯಾಯಾಲಯ, ಕಠಿಣ ಶಿಕ್ಷೆಯಾಗಿ ಪರಿವರ್ತಿಸಿದೆ.
COP28 ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕತಾರ್ ಶೇಕ್ ತಮೀಮ್ ಬಿನ್ ಹಮಾದ್ ಅಲ್ ತಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಈ ನಿರ್ಧಾರ ಹೊರಬಂದಿರುವುದು ಭಾರತದ ರಾಜತಾಂತ್ರಿಕತೆಗೆ ಸಿಕ್ಕಿದ ಅತಿ ದೊಡ್ಡ ಗೆಲುವು ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಮರುಪರಿಶೀಲಿಸಲು ಭಾರತ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ COP28 ಶೃಂಗಸಭೆಯಲ್ಲಿ ಕತಾರ್ ಸರ್ಕಾರದ ಸಚಿವರು ಹಾಗೂ ಹಲವು ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕತಾರ್ ಕೋರ್ಟ್ ಮಹತ್ವದ ಈ ನಿರ್ಧಾರ ಪ್ರಕಟಿಸಿದ್ದು, ಗಲ್ಲು ಶಿಕ್ಷೆ ರದ್ದುಗೊಳಿಸಿ ಜೈಲು ಶಿಕ್ಷೆ ವಿಧಿಸಿದೆ.