ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ

ಮಂಗಳೂರು: ಭಾರತ ಚುನಾವಣಾ ಆಯೋಗವು 2024ರ ಜನವರಿ 1ರ ಅರ್ಹತಾ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆ ಅರ್ಜಿ ಫಾರ್ಮ್ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು 2024 ರ ಜ.12ಕ್ಕೆ ವಿಸ್ತರಿಸಲಾಗಿದ್ದು, ದತ್ತಾಂಶಗಳ ಕ್ರೋಡೀಕರಣ ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನವರಿ 17ಕ್ಕೆ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಜನವರಿ 22ಕ್ಕೆ ವಿಸ್ತರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here