ಫ್ಯಾನ್‍ಗೆ ನೇಣು ಬಿಗಿದು ವಿದ್ಯಾರ್ಥಿನಿ ವರ್ಷಿಣಿ ಆತ್ಮಹತ್ಯೆ

ಮಂಗಳೂರು(ಬೆಂಗಳೂರು): ಬೆಂಗಳೂರಿನ ಸುಧಾಮನಗರದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಈ ಯುವತಿಯನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ.

ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜೊಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here