ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ-ಕರಾವಳಿ ಸೇರಿದಂತೆ ಹಲವೆಡೆ 3-4 ದಿನ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಕರಾವಳಿಯಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here