ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ-ಹಲವು ಪ್ರಯಾಣಿಕರಿಗೆ ಗಾಯ-ಆಸ್ಪತ್ರೆಗೆ ದಾಖಲು

ಮಂಗಳೂರು(ಕೈಕಂಬ): ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್‌ವೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜ.2ರ ರಾತ್ರಿ ನಡೆದಿದೆ.

ಘಟನೆಯಿಂದ ಸುಮಾರು 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಶುಭಲಕ್ಷ್ಮೀ ಕೈಕಂಬದಿಂದ ಅಡ್ಡೂರು ಕಡೆ‌ ಸಂಚರಿಸುತ್ತಿದ್ದು, ಬಸ್ಸಿನಲ್ಲಿ 50ರಿಂದ 60 ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.‌ ಕಳೆದ ಹಲವಾರು ಸಮಯಗಳಿಂದ ಈ ರಸ್ತೆಯ ಒಂದು ಬದಿ ಕುಸಿದಿದ್ದು, ಸಂಬಂಧಪಟ್ಟವರು ಈ ಬಗ್ಗೆ ಯಾವುದೇ ಕ್ರಮ‌ ಕೈಗೊಳ್ಳದೇ ಇರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here