



ಮಂಗಳೂರು: ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ ಅಶ್ರಫ್ ಮೆತ್ತಡ್ಕ ಮತ್ತು ಕುಟುಂಬ ಸಂಚರಿಸುತ್ತಿದ್ದ ಕಾರು ಬಹರೈನಿನಲ್ಲಿ ಅಪಘಾತಕ್ಕೀಡಾಗಿದ್ದು, ಮೂರು ವರ್ಷದ ಮಗು ಅಯಾನ್ ಅಬ್ದುಲ್ಲಾ ಮೃತಪಟ್ಟ ಘಟನೆ ವರದಿಯಾಗಿದೆ.







ದಂಪತಿಗಳು ಕಾರಿನಲ್ಲಿ ಸಂಚರಿಸುತ್ತಿರುವಾಗ ಅಪಗಾತ ಸಂಭವಿಸಿದ್ದು, ಗಾಯಗೊಂಡಿರುವ ಅಶ್ರಫ್ ಮತ್ತು ಅವರ ಪತ್ನಿ ಬಹರೈನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.














