ಮಂಗಳೂರು (ಹೊಸದಿಲ್ಲಿ):ಸೊಮಾಲಿಯಾ ಕರಾವಳಿಯ ಬಳಿ 15 ಮಂದಿ ಭಾರತೀಯ ಸಿಬ್ಬಂದಿ ಇದ್ದ ಹಡಗನ್ನು ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಲೈಬೀರಿಯಾ ಧ್ವಜ ಹೊಂದಿದ್ದ ಹಡಗನ್ನು (‘ಎಂವಿ ಲೀಲಾ ನಾರ್ ಫೋಕ್ʼ) ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ಭಾರತೀಯ ನೌಕಾಪಡೆಯ ಯುದ್ಧನೌಕೆ ‘ಐಎನ್ಎಸ್’ ಚೆನ್ನೈ, ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಅಪಹರಣಕ್ಕೊಳಗಾದ ಹಡಗಿನ ಮೇಲೆ ನಿಗಾ ಇರಿಸಲಾಗಿದ್ದು, ಭಾರತೀಯ ಸಿಬ್ಬಂದಿಯೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.