ಮಂಗಳೂರು: ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಶ್ರೀ ರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿರುವ ಜ.22ರಂದು ರಾಜ್ಯದ ಮುಜರಾಯಿ ಇಲಾಖಾ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಜ.22ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡಿನಿಂದ 12:32 ರವರೆಗೆ ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಅದೇ ಸಮಯದಲ್ಲಿ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಮಹಾಮಂಗಳಾರತಿ ಮತ್ತು ವಿಶೇಷ ಪೂಜೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.