ಮಂಗಳೂರು(ಪಣಜಿ): ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿ, ಶವವನ್ನು ಬ್ಯಾಗ್ ನಲ್ಲಿಟ್ಟುಕೊಂಡು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಬಂಧನಕ್ಕೊಳಗಾದ ಮೈಂಡ್ ಫುಲ್ ಎಐ ಲ್ಯಾಬ್ ಎಂಬ ಸ್ಟಾಟರ್ಪ್ ಕಂಪೆನಿಯ ಸಿಇಓ ಸುಚನಾ ಸೇಠ್ ಗೆ ನ್ಯಾಯಾಲಯ 6 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.
ಸುಚನಾ ಸೇಠ್ ಗೆ ವೆಂಕಟರಾಮನ್ ಎಂಬವರ ಜೊತೆ ವಿವಾಹವಾಗಿದ್ದು, ಅದಾಗಲೇ ವಿಚ್ಛೇದನ ವಿವಾದ ಕೋರ್ಟ್ ನಲ್ಲಿತ್ತು. ವಾರಕ್ಕೊಮ್ಮೆ ಕೋರ್ಟ್ ಆದೇಶದಂತೆ ಪತಿ ವೆಂಕಟರಾಮನ್ ಗೆ ಮಗುವನ್ನ ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಇದು ಆಕೆಗೆ ಇಷ್ಟವಿಲ್ಲದೆ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಬಂಧಿತ ಸುಚನಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮ್ಹಾಪ್ಸಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಸುಚನಾ ತನಗೆ ಕಡಿಮೆ ಶಿಕ್ಷೆ ನೀಡಬೇಕು ಎಂದು ನ್ಯಾಯಾಧೀಶರ ಬಳಿ ಬೇಡಿಕೊಂಡಿದ್ದು, ಪೊಲೀಸರು ವಕೀಲರ ಬಳಿ ಮಾತನಾಡಲು ಬಿಡದೆ ನೇರವಾಗಿ ಇಲ್ಲಿಗೆ ಕರೆತಂದಿದ್ದಾರೆ ಎಂದು ತಿಳಿಸಿದ್ದಾರೆ.
ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು ಎಂದಿದ್ದಾಳೆ. ಇದೇ ನೋವಿನಲ್ಲಿ ಕೈ ಕುಯ್ದ ಆತ್ಮಹತ್ಯೆಗೆ ಯತ್ನಿಸಿದೆ, ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್ ಕೇಸ್ ನಲ್ಲಿ ಮಗುವಿನ ಬಾಡಿ ಹಾಕಿ ಪರಾರಿಯಾಗಲು ಯತ್ನಿಸಿದೆ ಎಂದು ವಿವರಿಸಿದ್ದಾಳೆ. ಮಗುವಿನ ತಂದೆ ವೆಂಕಟರಾಮನ್ ಜ.9ರಂದು ಇಂಡೋನೇಷ್ಯಾದಿಂದ ಆಗಮಿಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ತಂದೆ ವೆಂಕಟರಾಮನ್ ಗೆ ಹಸ್ತಾಂತರಿಸಲಾಗಿದ್ದು, ಸಕಲ ವಿಧಿವಿಧಾನಗಳಿಂದ ಅಂತ್ಯಕ್ರಿಯೆ ನೆರವೇರಿಸಲಾಗಿದೆ.