ಮಂಗಳೂರು(ಹೊಸದಿಲ್ಲಿ): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಆಯ್ಕೆ ಮಾಡಲಾಗಿದೆ.ಜೆಡಿ(ಯು) ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಚಾಲಕರಾಗಿ ನೇಮಿಸಲಾಗಿದೆ. ಆದರೆ ಅವರು ಈ ಹುದ್ದೆಯನ್ನು ಸ್ವೀಕರಿಸಲು ಒಪ್ಪಿಲ್ಲ ಎಂದೂ ವರದಿಯಾಗಿದೆ. ಈ ಕುರಿತು ಅಧಿಕೃತ ಹೇಳಿಕೆ ಇನ್ನಷ್ಟೇ ಬರಬೇಕಿದೆ.
ಇಂದು(ಜ.13)ನಡೆದ ಇಂಡಿಯಾ ಮೈತ್ರಿಕೂಟದ ಪ್ರಮುಖರ ವರ್ಚುವಲ್ ಸಭೆಯಲ್ಲಿ ಸರ್ವಾನುಮತದಿಂದ ಇಬ್ಬರ ಆಯ್ಕೆಯನ್ನು ಮಾಡಲಾಗಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಟಿಎಂಸಿ ನಾಯುಕಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಭೆಯಲ್ಲಿ ಉಪಸ್ಥಿತರಿರಲಿಲ್ಲ. ಅವರಿಗೆ ನಿರ್ಧಾರದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿದು ಬಂದಿದೆ.
ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕೂಡ ಈ ಹುದ್ದೆಗೆ ಆಕಾಂಕ್ಷಿ ಎಂದು ತಿಳಿಯಲಾಗಿತ್ತಾದರೂ, ಕಾಂಗ್ರೆಸ್ ಪಕ್ಷದ ಯಾರಾದರೂ ಈ ಹುದ್ದೆ ವಹಿಸಬೇಕೆಂದು ಅವರು ಇಂದಿನ ಸಭೆಯಲ್ಲಿ ಹೇಳಿದರು ಎಂದು ತಿಳಿದು ಬಂದಿದೆ.