ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ ಸ್ಮರಣಾರ್ಥ ಜ.15 ಸೇನಾ ದಿನ ಆಚರಣೆ-ಸೈನಿಕರ ತ್ಯಾಗ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು(ನವದೆಹಲಿ): ಸೇನಾ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು, ದೇಶದ ಸೈನಿಕರ ಅಚಲ ಬದ್ಧತೆ ಮತ್ತು ತ್ಯಾಗವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಸೈನಿಕರು ಶಕ್ತಿ ಮತ್ತು ಸ್ಥಿರತೆಯ ಆಧಾರ ಸ್ತಂಭಗಳು ಎಂದು ಹೇಳಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸೇನಾ ದಿನದಂದು ನಾವು ನಮ್ಮ ಸೇನಾ ಸಿಬ್ಬಂದಿಯ ಅಸಾಧಾರಣ ಧೈರ್ಯ, ಅಚಲ ಬದ್ಧತೆ ಮತ್ತು ತ್ಯಾಗವನ್ನು ಗೌರವಿಸುತ್ತೇವೆ. ನಮ್ಮ ದೇಶವನ್ನು ರಕ್ಷಿಸುವಲ್ಲಿ ಮತ್ತು ನಮ್ಮ ಸಾರ್ವಭೌಮತ್ವವನ್ನು ಎತ್ತಿಹಿಡಿಯುವಲ್ಲಿ ಅವಿರತ ಸಮರ್ಪಣೆ, ಅವರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಅವರು ಶಕ್ತಿ ಮತ್ತು ಸ್ಥಿರತೆಯ ಆಧಾರ ಸ್ತಂಭಗಳು’ ಎಂದು ಬರೆದುಕೊಂಡಿದ್ದಾರೆ. ದೇಶದ ಮೊದಲ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ ಅವರ ಸ್ಮರಣಾರ್ಥ ಜ. 15ರಂದು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here