ಎಸ್.ಎಸ್‌ಎಲ್.ಸಿ., ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಂತಿಮ ವೇಳಾಪಟ್ಟಿ

ಮಂಗಳೂರು: 2024ರ ಎಸ್.ಎಸ್‌ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ, ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.

ಮಾ.25ರ ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್- NCERT, ಮಾ.27ರಂದು ಸಮಾಜ ವಿಜ್ಞಾನ, ಮಾ.30ರಂದು ವಿಜ್ಞಾನ, ರಾಜ್ಯಶಾಸ್ತ್ರ, ಎಪ್ರಿಲ್ 2ರಂದು ಗಣಿತ, ಸಮಾಜಶಾಸ್ತ್ರ, ಎ.3ರಂದು ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿಯ ಪರೀಕ್ಷೆಯು ಈ ಕೆಳಗಿನಂತೆ ನಡೆಯಲಿದೆ.
ಮಾ.01-2024: ಕನ್ನಡ, ಅರೇಬಿಕ್
ಮಾ.04: ಗಣಿತ
ಮಾ.05: ರಾಜ್ಯ ಶಾಸ, ಸಂಖ್ಯಾಶಾಸ್ತ್ರ
ಮಾ.06: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
ಮಾ.07: ಇತಿಹಾಸ ಹಾಗೂ ಭೌತಶಾಸ್ತ್ರ
ಮಾ.09: ಐಚ್ಛಿಕ ಕನ್ನಡ, ಲೆಕ್ಕಶಾಸ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
ಮಾ.11: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13: ಇಂಗ್ಲಿಷ್
ಮಾ.15: ಹಿಂದೂಸ್ತಾನಿ ಸಂಗೀತ, ಮನಃಶಾಸ, ರಸಾಯನ ಶಾಸ್ತ್ರ, ಮೂಲಗಣಿತ
ಮಾ.16: ಅರ್ಥಶಾಸ್ತ್ರ
ಮಾ.18: ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮಾ.20: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
ಮಾ.22: ಹಿಂದಿ ಪರೀಕ್ಷೆ ನಡೆಯಲಿದೆ.

ಮೂರು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ:

ಈ ವರ್ಷ ಎಸ್‌ಎಸ್‌ಎಲ್‌ಸಿ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದು. ಈ ಹಿಂದೆ ಒಂದು ಬಾರಿ ವಾರ್ಷಿಕ ಪರೀಕ್ಷೆ ಬರೆದು, ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ಪಾಸಾಗಲಿ, ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು. ಮೂರರಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಮುಂದಿನ ಅನುಕೂಲಗಳಿಗಾಗಿ ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.

ಮೂರು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1:ಮಾರ್ಚ್ 30ರಿಂದ ಏಪ್ರಿಲ್ 15ರವರೆಗೆ.ಮೇ 8ರಂದು ಫಲಿತಾಂಶ.ಮೇ 23ರಂದು ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ಜೂನ್ 12ರಿಂದ 19ರವರೆಗೆ ಪರೀಕ್ಷೆ. ಜೂನ್ 29 ಕ್ಕೆ ಫಲಿತಾಂಶ. ಜುಲೈ 10 ರಂದು ಮರುಮೌಲ್ಯಮಾಪನದ ಫಲಿತಾಂಶ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ನ್ 29ರಿಂದ ಆಗಸ್ಟ್ 5ರವರೆಗೆ ಪರೀಕ್ಷೆ. ಆಗಸ್ಟ್ 19 ರಂದು ಫಲಿತಾಂಶ. ಆಗಸ್ಟ್ 26ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟವಾಗಲಿದೆ.

LEAVE A REPLY

Please enter your comment!
Please enter your name here