ಗರ್ಭಗುಡಿ ಪ್ರವೇಶಿಸಿದ ರಾಮಲಲ್ಲಾ ವಿಗ್ರಹ-ಗರ್ಭಗುಡಿಯಲ್ಲಿ ವಿಶೇಷ ಪೂಜೆ-ಪೂರ್ವಭಾವಿಯಾಗಿ ‘ಕಲಶ ಪೂಜೆ’

ಮಂಗಳೂರು(ರಾಮಮಂದಿರ): ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವಿಧಿವಿಧಾನಗಳಿಗೆ ತಯಾರಿ ನಡೆಯುತ್ತಿದ್ದು, ಇಂದು (ಜ.18) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. 150 ರಿಂದ 200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಒಳಗೆ ತರುವ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ರಾಮಲಲ್ಲಾನ ವಿಗ್ರಹವನ್ನು ಜ.17ರಂದು ಸಂಜೆ ಅಯೋಧ್ಯೆ ದೇವಸ್ಥಾನಕ್ಕೆ ತರಲಾಗಿತ್ತು. ಅದನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆತ್ತಲಾಯಿತು. ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150 ರಿಂದ 200 ಕೆಜಿ ತೂಕದ ವಿಗ್ರಹವನ್ನು ಜ.17ರಂದು ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ನಿನ್ನೆ ಸಂಜೆ ರಾಮಲಲ್ಲಾ ನ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿತ್ತು. ಸಂಜೆ ರಾಮಮಂದಿರದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿ ಆಚರಣೆಯ ಅಂಗವಾಗಿ ‘ಕಲಶ ಪೂಜೆ’ ನಡೆಯಿತು.

LEAVE A REPLY

Please enter your comment!
Please enter your name here