ಜ.26ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಜಾಥಾ – ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಧಿಕಾರಿ ಕರೆ

ಮಂಗಳೂರು(ಪುತ್ತೂರು): ಜ.26ರಿಂದ ಜಿಲ್ಲೆಯಲ್ಲಿ ನಡೆಯಲಿರುವ ಸಂವಿಧಾನ ಜಾಥಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್‌ ತಿಳಿಸಿದ್ದಾರೆ.

ಇಂದು(ಸೋಮವಾರ) ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದ ಜಾತ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ ತಂಡಗಳ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮಗಳಲ್ಲಿ ಈ ಜಾಥಾ ಸಂಚರಿಸಲಿದೆ. ಇದಕ್ಕಾಗಿ ಎರಡು ತಂಡಗಳಲ್ಲಿ ಜಿಲ್ಲೆಯಾದ್ಯಂತ ಜಾಥಾ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜ.26ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಜಾಥಾಗೆ ಚಾಲನೆ ನೀಡಲಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್‌, ಅಪರ ಜಿಲ್ಲಾಧಿಕಾರಿ ಸಂತೋಷ್‌ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here