ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ – ‌ಅಕ್ಕ ಎಂದೇ ಕರೆಯುತ್ತಿದ್ದ‌ ಕೊಲೆ ಆರೋಪಿಯ ಬಂಧನ- 30 ಗಂಟೆಯೊಳಗೆ ಪ್ರಕರಣ ಭೇದಿಸಿದ ಪೊಲೀಸರು

ಮಂಗಳೂರು(ಮಂಡ್ಯ): ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ ​​(21) ಬಂಧಿತ ಆರೋಪಿಯಾಗಿದ್ದು, ಡಿವೈಎಸ್​​ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ನಿವಾಸಿಯಾಗಿದ್ದ ದೀಪಿಕಾ, ಜನವರಿ 20 ರಂದು ಎಂದಿನಂತೆ ಶಾಲೆಗೆ ಹೋಗಿದ್ದರು. ಆದರೆ, ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ, ತನ್ನ ಪತ್ನಿ ನಾಪತ್ತೆಯಾಗಿರುವುದಾಗಿ ಪತಿ ಲೋಕೇಶ್​​​ ಪೊಲೀಸರಿಗೆ ದೂರು ನೀಡಿದ್ದರು. ಸುತ್ತಮುತ್ತ ತೀವ್ರ ಹುಡುಕಾಟ ನಡೆಸಿದಾಗ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ದೀಪಿಕಾಳ ಪತಿ ಲೋಕೇಶ್, ನಿತೀಶ್ ಮೇಲೆ ಶಂಕೆ ವ್ಯಕ್ತಪಸಿಡಿದ್ದರು. ಅಲ್ಲದೆ ದೀಪಿಕಾಳನ್ನ ಯುವಕನೊಬ್ಬ ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಇದನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳವರೆಗೆ ನಿತೀಶ್ ಗ್ರಾಮದಲ್ಲೇ ಇದ್ದು, ದೀಪಿಕಾಳ ಶವ ಪತ್ತೆಯಾದಂದಿನಿಂದ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್​ನನ್ನು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ವಿಚಾರಣೆ ವೇಳೆ ದೀಪಿಕಾಳನ್ನು ಪ್ಲ್ಯಾನ್​ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾಳನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ. ತನ್ನ ಮೇಲೆ ಅನುಮಾನ ಬಾರದಂತೆ ನಿತೀಶ್ ನಾಟಕವಾಡಿದ್ದನು. ದೀಪಿಕಾಳನ್ನು ಅಕ್ಕ ಎಂದೂ ಆಕೆಯ ತಂದೆಯನ್ನು ಅಪ್ಪಾಜಿ ಎಂದೇ ನಿತೇಶ್ ಕರೆಯುತ್ತಿದ್ದ.

LEAVE A REPLY

Please enter your comment!
Please enter your name here