ಮಂಗಳೂರು(ಪಾಟ್ನಾ): ‘ಇಂಡಿಯಾ’ ಮೈತ್ರಿಕೂಟದ ನಾಯಕ ನಿತೀಶ್ ಕುಮಾರ್ ಬಿಹಾರ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲರನ್ನು ಭೇಟಿಯಾದ ನಿತೀಶ್ಕುಮಾರ್ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಹಾರದ ಜೆಡಿಯು-ಆರ್ಜೆಡಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಂಡಿದೆ. ರಾಜೀನಾಮೆಗೂ ಮುನ್ನ ತನ್ನ ಬೆಂಬಲಿಗರ, ಶಾಸಕರ ಸಭೆ ನಡೆಸಿದ ನಿತೀಶ್ ಕುಮಾರ್ ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.