ಮಂಗಳೂರು: ಸಂಸದ ಡಿ ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಕಾಶ್ ಪಿ ಮಂಗಳೂರಿನ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಕಮಿಷನರ್ ಅವರಿಗೂ ಇದರೊಂದಿಗೆ ದೂರು ಸಲ್ಲಿಸಲಾಗಿದೆ.
ಡಿ ಕೆ ಸುರೇಶ್ ಸಂಸದರಾಗಿದ್ದು ಭಾರತ ವಿಭಜಿಸುವ, ಕುಮ್ಮಕ್ಕು ನೀಡುವ ಹೇಳಿಕೆ ನೀಡಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ. ಫೆ.7 ರಂದು ದೂರಿನ ವಿಚಾರಣೆ ನಡೆಯಲಿದೆ.