ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡಿದ ಘಟನೆ ನಡೆದಿದೆ.
ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ಗೆ ಫೆ.4ರಂದು ಆಗಮಿಸಿದ್ದರು. ಈ ವೇಳೆ ಅಲ್ಲಿಗಾಗಮಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜೋಡಿಯನ್ನು ತರಾಟೆಗೆ ತೆಗೆದುಕೊಂಡು ಕಿರಿಕ್ ಮಾಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿ ಹಾಗೂ ಕಾನೂನು ಕೈಗೆತ್ತಿಕೊಂಡ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಯುವಕ ಮತ್ತು ಯುವತಿ ಪೈಕಿ ಓರ್ವರು ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದು , ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನ ಆಧಾರದಲ್ಲಿ ಕಾನೂನು ಕೈಗೆತ್ತಿಕೊಂಡ ರಾಮಸೇನೆಯ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.