ಕಾಡಿದ ಅನಾರೋಗ್ಯ-ಮಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ ಯುವತಿ ನೇಣಿಗೆ ಶರಣು

ಮಂಗಳೂರು: ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ವನಿತಾ ಮಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಫೆ. 8 ರಂದು ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕಾಗಮಿಸಿ ಡೆತ್ ನೋಟ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here