6 ವರ್ಷದ ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ – ಸಂಚಾರಿ ಪೊಲೀಸರ ಆದೇಶ

ಮಂಗಳೂರು(ಬೆಂಗಳೂರು): ಪುಟ್ಟ ಮಕ್ಕಳು ಹೆಲ್ಮೆಟ್ ಇಲ್ಲದೆ ಇನ್ನೂ ದ್ವಿಚಕ್ರ ವಾಹನದಲ್ಲಿ ಹೋಗುವಂತಿಲ್ಲ. ಶಾಲೆಗಳ ಬಳಿ ಬರುತ್ತಿದ್ದ ಹಿನ್ನಲೆ 6 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇನ್ನು ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪ್ರತಿದಿನ ಸಂಚಾರ ನಿಯಮ‌ ಉಲ್ಲಂಘನೆ ಮಾಡಿ ನಮಗೂ ಅದಕ್ಕೂ ಸಂಬಂಧವೇ ಇಲ್ಲ ಅನ್ನೋ‌ ರೀತಿ ಕೆಲವರು ಇದ್ದಾರೆ. ಹಾಗಾಗಿ ಇದೀಗ ಮನೆ ಮನೆಗೆ ತೆರಳಿ ದಂಡ ವಸೂಲಿ ಮಾಡುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here