ಚೆನ್ನಗೊಂಡನಹಳ್ಳಿ ಅರಣ್ಯಪ್ರದೇಶದಲ್ಲಿ ಬೆಂಕಿ-ನೂರಾರು ಎಕರೆ ಹುಲ್ಲುಗಾವಲು, ಕಾಡು ಬೆಂಕಿಗಾಹುತಿ-ಕಿಡಿಗೇಡಿ ಪ್ರವಾಸಿಗರ ಕೃತ್ಯ?

ಮಂಗಳೂರು(ಚಿಕ್ಕಮಗಳೂರು): ಇಲ್ಲಿನ ಅರಣ್ಯ ವ್ಯಾಪ್ತಿಯಲ್ಲಿನ ಚೆನ್ನಗೊಂಡನಹಳ್ಳಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದಲ್ಲಿ ಅರಣ್ಯ ಸಂಪತ್ತು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.

ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ, ಪಶ್ಚಿಮಘಟ್ಟ ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ ಹೊಂದಿಕೊಂಡಿರುವ ಚೆನ್ನಗೊಂಡನಹಳ್ಳಿ ಪ್ರದೇಶದಲ್ಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಬಿಸಿಲ ಧಗೆ ಮತ್ತು ಗಾಳಿಯಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗದೆ ಅರಣ್ಯ ಇಲಾಖೆ ಸಿಬ್ಬಂದಿ ಪರದಾಡುವಂತಾಯಿತು. ಕ್ಲಿಷ್ಟಕರ ಪ್ರದೇಶದಲ್ಲಿ ಬೆಂಕಿ ಆವರಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರೂ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಅಮೂಲ್ಯ ಔಷಧಗುಣವುಳ್ಳ ಸಸ್ಯ ಸಂಪತ್ತು, ಸಾಕಷ್ಟು ಮರಗಿಡಗಳು ಬೆಂಕಿಗೆ ಆಹುತಿಯಾಗಿದೆ. ಪ್ರವಾಸಿಗರು ಮಾಡಿದ ಕಿಡಿಗೇಡಿತನದಿಂದ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕಾಡಾನೆಗಳ ಹಿಂಡು ಜಿಲ್ಲೆಯಲ್ಲಿ ಬೀಡು ಬಿಟ್ಟಿವೆ. ಚಿಕ್ಕೊಳಲೆಯಲ್ಲಿ ಬೀಡು ಬಿಟ್ಟಿರುವ ಆನೆಗಳು ಸ್ಥಳದಿಂದ ಕದಲುತ್ತಿಲ್ಲ. ಬೆಂಕಿಯ ಕೆನ್ನಾಲಿಗೆ ರಸ್ತೆ ಬದಿಯಲ್ಲೂ ವ್ಯಾಪಿಸಿರುವುದರಿಂದ ಪ್ರವಾಸಿಗರು ಅಲ್ಲಿಯೇ ಸಿಲುಕಿಕೊಂಡಿದ್ದರು.

LEAVE A REPLY

Please enter your comment!
Please enter your name here