ಮಂಗಳೂರು: ನಗರದ ಸೇಂಟ್ ಜೆರೋಸಾ ಶಾಲೆ ವಿವಾದದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ.ಆರ್.ನಾಯ್ಕ ಅವರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಕಾಲೇಜಿನ ಪ್ರವಾಚಕರಾಗಿ ವರ್ಗಾವಣೆ ಮಾಡಲಾಗಿದೆ.
ಕಲಬುರಗಿಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಕಚೇರಿಯ ಯೋಜನೆ ವಿಭಾಗದಲ್ಲಿ ಉಪನಿರ್ದೇಶಕರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ಡಿಡಿಪಿಐ ಸ್ಥಾನಕ್ಕೆ ವರ್ಗಾಯಿಸಲಾಗಿದೆ.ಜೆರೋಸಾ ಶಾಲೆಯ ವಿವಾದ ಭುಗಿಲೆದ್ದಾಗ ಡಿಡಿಪಿಐ ಡಿ.ಆರ್.ನಾಯ್ಕ ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಕಾಂಗ್ರೆಸ್ ನಾಯಕರು ಆಕ್ಷೇಪಿಸಿದ್ದರು. ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ, ಐವನ್ ಡಿಸೋಜ, ಜೆ.ಆರ್. ಲೋಬೊ ಕೂಡ ಡಿಡಿಪಿಐ ವರ್ತನೆಯನ್ನು ಖಂಡಿಸಿದ್ದರು.