ಮಂಗಳೂರು(ಬೆಂಗಳೂರು): ಇಂದು ಸಿಎಂ ಸಿದ್ದರಾಮಯ್ಯ ರಾಜ್ಯದ 2024-25ನೇ ಸಾನಿಲ ಬಜೆಟ್ ಮಂಡಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೇಸ್ ವಿರುದ್ದ ಬಿಜೆಪಿ ಕಿಡಿಕಾರಿದೆ. ಅದರಲ್ಲೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರತಿಭಟನೆಯಲ್ಲಿ ಬಳಸಿದ ಪ್ಲೇ ಕಾರ್ಡ್ ವೈರಲ್ ಆಗಿದೆ.
ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಬರೆದಿರುವ ಪೋಸ್ಟರ್ ಹಿಡಿದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯ ಬೆನ್ನಲ್ಲೆ ಬಿಜೆಪಿ ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸಿದೆ. ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ ಎಂದು ಬರೆದಿರುವ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದರೆ, ಹರೀಶ್ ಪೂಂಜಾ ʼದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂಬ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.