ಮಂಗಳೂರು(ನವದೆಹಲಿ): ದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದ್ದ ಟೆಂಟ್ ಕುಸಿದು 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ನೆಹರೂ ಕ್ರೀಡಾಂಗಣದ ಗೇಟ್ ನಂಬರ್ 2ರ ಬಳಿ ಅಳವಡಿಸಲಾಗಿದ್ದ ತಾತ್ಕಾಲಿಕ ಟೆಂಟ್ ಕುಸಿದು ಬಿದ್ದಿದೆ. ಅವಶೇಷಗಳಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.