ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾದ ಉರ್ದು ಕವಿ ಗುಲ್ಝಾರ್ ಮತ್ತು ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ

ಮಂಗಳೂರು(ಹೊಸದಿಲ್ಲಿ): ಖ್ಯಾತ ಉರ್ದು ಕವಿ ಗುಲ್ಝಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 2023 ನೇ ಸಾಲಿನ 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.

ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರಾದ ಗುಲ್ಝಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಹಿತ್ಯ ಕೃಷಿಗೆ ಹೆಸರುವಾಸಿಯಾಗಿದ್ದಾರೆ. ಅವರು ಈ ಹಿಂದೆ 2002 ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಹಲವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞರಾಗಿದ್ದು, 100 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಗೋವಾದ ಬರಹಗಾರ ದಾಮೋದರ್ ಮೌಜೊ ಅವರು 2022 ನೇ ಸಾಲಿನಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ.

LEAVE A REPLY

Please enter your comment!
Please enter your name here