ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನಾರೀಮನ್ ನಿಧನ

ಮಂಗಳೂರು: ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರೀಮನ್(95) ಫೆ.21ರ ಬೆಳಗ್ಗೆ ದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುಮಾರು 70 ವರ್ಷಗಳ ಕಾಲ ವಕೀಲ ವೃತ್ತಿ ಮಾಡಿದ್ದ ಅವರು ಹಲವಾರು ಪ್ರಮುಖ ಪ್ರಕರಣಗಳಲ್ಲಿ ವಾದ ಮಂಡಿಸಿದ್ದರು. ಕಾವೇರಿ ಸೇರಿದಂತೆ ಹಲವು ಜಲವಿವಾದ ಪ್ರಕರಣಗಳಲ್ಲಿ ಕರ್ನಾಟಕದ ಪರವಾಗಿಯೂ ವಾದ ಮಂಡಿಸಿ, ಹಲವು ಪ್ರಕರಣಗಳಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಟ್ಟಿದ್ದರು. 1950ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಅವರು ವಕೀಲ ವೃತ್ತಿ ಆರಂಭಿಸಿದ್ದರು. ಬಳಿಕ, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಆಗಿಯೂ ನೇಮಕವಾಗಿದ್ದರು. 1991–2010ರ ವರೆಗೆ ಭಾರತದ ಬಾರ್ ಒಕ್ಕೂಟದ ಅಧ್ಯಕ್ಷರಾಗಿದ್ದರು. ಅಲ್ಲದೆ, 1989–2005ರವರೆಗೆ ಪ್ಯಾರಿಸ್‌ನಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮಂಡಳಿಯ ನ್ಯಾಯಾಲಯದ ಉಪಾಧ್ಯಕ್ಷರೂ ಆಗಿದ್ದರು.

LEAVE A REPLY

Please enter your comment!
Please enter your name here