ಮಂಗಳೂರು(ಬೆಂಗಳೂರು): ನನ್ನ ಮಾತಿನಿಂದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಹಿಂದೂ ಕಾರ್ಯಕರ್ತರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ಆರ್ ಅಶೋಕ್ ಹೇಳಿದ್ದಾರೆ.
ರಾಮನಗರ ಮುಸ್ಲಿಂ ಲಾಯರ್, ಜ್ಞಾನ ವ್ಯಾಪಿ ವಿಚಾರವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದ. ಇದನ್ನು ಸದನದಲ್ಲಿ ಪ್ರಶ್ನೆ ಮಾಡಿದ್ದೆ. ಆ ಸಂಧರ್ಭದಲ್ಲಿ ನಾನೂ ಕೂಡ ಗೃಹಸಚಿವ ಆಗಿದ್ದೆ. ನಾನೂ ಕೂಡ ಭಜರಂಗದಳ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದೆ ಎಂದು ಹೇಳಿದ್ದೆ. ಇದರಿಂದ ವಿಶ್ವ ಹಿಂದೂ ಪರಿಷತ್ ಭಜರಂಗದಳದವರ, ಹಿಂದೂ ಕಾರ್ಯಕರ್ತರಿಗೆ ಮನಸ್ಸಿಗೆ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ ಎಂದು ಅಶೋಕ್ ಹೇಳಿದ್ದಾರೆ.
ನಾನು ಗೃಹ ಸಚಿವನಾಗಿದ್ದಾಗ ಘಟನೆಯೊಂದಕ್ಕೆ ಸಂಬಂಧಿಸಿ ಒತ್ತಡ ಇದ್ದರೂ ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ಹಾಕಿದ್ದೆ ಎನ್ನುವ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಸ್ವಪಕ್ಷ, ಸಂಘಟನೆ ಒಳಗೇ ಆಕ್ರೋಶ ವ್ಯಕ್ತವಾಗಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್ ಅವರನ್ನು ತೆಗೆದು ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಪತ್ರ ಬರೆದು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ ಆರ್ ಅಶೋಕ್ ಕ್ಷಮೆ ಯಾಚಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ