1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ-ಇಲ್ಲಿದೆ ಪೂರ್ತಿ ವಿವರ

ಮಂಗಳೂರು(ಬೆಂಗಳೂರು): ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಸಾವಿರ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ (ಗ್ರಾಮ ಲೆಕ್ಕಾಧಿಕಾರಿ) ಭರ್ತಿ ಮಾಡಲಾಗಿದೆ. ಜಿಲ್ಲೆವಾರು ಹುದ್ದೆಗಳ ಕುರಿತು ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳು ಪರಿಶೀಲನೆ ನಡೆಸಬಹುದಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ, ಡಿಪ್ಲೋಮಾ ಅಥವಾ ಎರಡು ವರ್ಷದ ಐಟಿಐ ಅಥವಾ ಎರಡು ವರ್ಷದ ಜೆಒಸಿ, ಜೆಓಡಿಸಿ, ಜೆಎಲ್​ಡಿಸಿ ವಿದ್ಯಾಭ್ಯಾಸವನ್ನು ಹೊಂದಿರಬೇಕು.
ವೇತನ: 21,400 – 42,000 ರೂ ಮಾಸಿಕ
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಈ ಪರೀಕ್ಷೆ ಎರಡು ಪತ್ರಿಕೆಯನ್ನೊಳಗೊಂಡಿದ್ದು, 200 ಅಂಕಗಳಿರಲಿವೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ ಮತ್ತು ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ. ಈ ಹುದ್ದೆಗೆ ಮಾರ್ಚ್​ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಏಪ್ರಿಲ್​ 3 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಅಂತಿಮ ದಿನಾಂಕ ಏಪ್ರಿಲ್​ 6 ಆಗಿದೆ.
ವಿಶೇಷ ಸೂಚನೆ: ಈ ಹುದ್ದೆಗಳು ಎನ್​ಪಿಎಸ್​ ಅಂದರೆ ಪಿಂಚಣಿ ರಹಿತ ಸೌಲಭ್ಯವನ್ನು ಹೊಂದಿದೆ.

ಅಧಿಸೂಚನೆ

ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರಗಳಿಗೆ kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

LEAVE A REPLY

Please enter your comment!
Please enter your name here