ಮಂಗಳೂರು: ಫೆ.23ರಂದು ಮಂಗಳೂರು ತಾಲೂಕು ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡುಶೆಡ್ಡೆ, ಶಿವನಗರದ ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಬಂಧಿತನಿಂದ 15 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ, ನಗದು 1,280/- ವಶಪಡಿಸಿಕೊಳ್ಳಲಾಗಿದೆ. ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿರುತ್ತವೆ.