ಎರಡು ಗುಂಪುಗಳ ಮಧ್ಯೆ ಜೈಲಿನಲ್ಲಿ ಮಾರಾಮಾರಿ-ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

ಮಂಗಳೂರು(ಕಲಬುರಗಿ): ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದಿದೆ.

ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ ಡಿಸಿಪಿ ಕ್ರೈಂ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here