ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ-ಕಟ್ಟುನಿಟ್ಟಿನ ಕ್ರಮ-ಪರೀಕ್ಷಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ

ಮಂಗಳೂರು(ಬೆಂಗಳೂರು): ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದು, ಈ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು 80 ಅಂಕಗಳಿಗೆ ಲಿಖಿತ ರೂಪದಲ್ಲಿ ಪರೀಕ್ಷೆ ಬರೆಯಲಿದ್ದು, ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಇನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇನ್ನು ಈ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಆಫರ್‌ ನೀಡಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗಲು ಹಾಗೂ ಪರೀಕ್ಷಾ ಕೇಂದ್ರದಿಂದ ಮನೆಗೆ ಮರಳಲು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಹಾಲ್‌ ಟಿಕೆಟ್‌ ತೋರಿಸುವ ಮೂಲಕ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here