ಮಂಗಳೂರು(ಬೆಂಗಳೂರು): ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ 2014-15ನೇ ಸಾಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ಜಾತಿಗಣತಿಯ ಅಧ್ಯಯನ ವರದಿಯನ್ನು ಇಂದು(ಫೆ.29) ರಾಜ್ಯ ಸರಕಾರಕ್ಕೆ ಸಲ್ಲಿಸಲಾಯಿತು.
ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಮತ್ತು ಸಮೀಕ್ಷೆಯ ದತ್ತಾಂಶಗಳನ್ನು ಸರಕಾರಕ್ಕೆ ಒಪ್ಪಿಸಿದ್ದಾರೆ. ಜಾತಿಗಣತಿ ವರದಿ ಬಿಡುಗಡೆಗೆ ವಿವಧ ಸಂಘಟನೆಗಳು ಒತ್ತಾಯಿಸಿದ್ದರೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದಿಂದ ವಿರೋಧ ವ್ಯಕ್ತವಾಗಿತ್ತು. ಲೋಕಸಭೆ ಚುನಾವಣಾ ಹೊಸ್ತಿಲಲ್ಲಿ ವರದಿ ಸಲ್ಲಿಕೆಯಾಗಿದ್ದು, ಮುಂಕ್ಯಮಂತ್ರಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿದೆ.