ಕರಾವಳಿ ಪತ್ರಿಕಾ ರಂಗದ ಹಿರಿಯಣ್ಣ, ಖ್ಯಾತ ಪತ್ರಕರ್ತ ಮನೋಹರ ಪ್ರಸಾದ್ ಇನ್ನಿಲ್ಲ

ಮಂಗಳೂರು: ಉದಯವಾಣಿ ಪತ್ರಿಕೆಯ ನಿವೃತ್ತ ಸಹಾಯಕ ಸಂಪಾದಕ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇಂದು(ಮಾ.1) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬ್ಯೂರೋ ಚೀಫ್ ಆಗಿ, ಸಹಾಯಕ ಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದು, ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು. ಉದಯವಾಣಿ ಪತ್ರಿಕೆಯಲ್ಲಿ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಜಿಲ್ಲೆಯ ಪ್ರಮುಖ ಕಾರ್ಯಕ್ರಮ ನಿರೂಪಕರಾಗಿದ್ದು ಸ್ಥಳೀಯ ಟಿವಿ ಚಾನಲ್‌ ಗಳಲ್ಲಿಯೂ ಛಾಪು ಮೂಡಿಸಿದ್ದರು. ಕಳೆದ ಹಲವು ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅವರು ಉಸಿರುಚೆಲ್ಲಿದ್ದಾರೆ. ಅವಿವಾಹಿತರಾಗಿದ್ದ ಮನೋಹರ್‌ ಪ್ರಸಾದ್‌ ಬಂಧುಬಳಗ ಸೇರಿದಂತೆ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here