ಮಂಗಳೂರು: ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ಮಂಗಳೂರು ಹೊರವಲಯದ ಪಣಂಬೂರು ಬೀಚ್‌ನಲ್ಲಿ ಮಾ.3ರಂದು ನಡೆದಿದೆ.
ಮಿಲನ್(20), ಲಿಖಿತ್(18) ಹಾಗೂ ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್ ಹಾಗೂ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ ನಾಗರಾಜ್ ಪಣಂಬೂರು ಬೀಚ್‌ನಲ್ಲಿ ಆಟ ಆಡುತ್ತಿದ್ದ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದಾರೆ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.