ಏಪ್ರಿಲ್ ಎರಡನೇ ವಾರದಲ್ಲಿ ಲೋಕಸಭಾ ಚುನಾವಣೆ: ಮಾ.14ಕ್ಕೆ ದಿನಾಂಕ ಘೋಷಣೆ ಸಾಧ್ಯತೆ?

ಮಂಗಳೂರು/ನವದೆಹಲಿ: ಮಾ.14 ಅಥವಾ 15 ರಂದು ಚುನಾವಣಾ ಆಯೋಗ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಅಂದಿನಿಂದಲೇ ನೀತಿಸಂಹಿತೆ ಜಾರಿಯಾಗಲಿದೆ. 2019ರ ಲೋಕಸಭಾ ಚುನಾವಣೆಯಂತೆಯೇ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಏಪ್ರಿಲ್ 2ನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here