ಮಂಗಳೂರು(ಬೆಂಗಳೂರು): ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಬ್ಬ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 7ರ ವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಮೂವರು ಆರೋಪಿಗಳನ್ನು ಬುಧವಾರ 39ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಧಾನಸೌಧ ಠಾಣೆ ಪೊಲೀಸರು ಹಾಜರು ಪಡಿಸಿದರು. ಬಂಧಿತ ಮೂವರ ಪೈಕಿ ಆರ್.ಟಿ. ನಗರದ ಮುನಾವರ್, ನವದೆಹಲಿಯ ಮಹಮ್ಮದ್ ಇಲ್ತಾಜ್ ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬ್ಯಾಡಗಿ ತಾಲ್ಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.