ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ-ಗೃಹ ಸಚಿವ ಪರಮೇಶ್ವರ್‌

ಮಂಗಳೂರು: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here