ಮಂಗಳೂರು(ಸ್ಯಾನ್ ಫ್ರಾನ್ಸಿಸ್ಕೋ): ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಟೈರ್ ಕಳಚಿಬಿದ್ದಿದೆ. ಪರಿಣಾಮ 2 ಕಾರುಗಳು ಜಖಂಗೊಂಡಿವೆ. ಜಪಾನ್‌ಗೆ ಹೊರಟಿದ್ದ ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ಸ್ಯಾನ್ ಫ್ರಾನ್ಸಿಸ್ಕೋದಿಂದ ಟೇಕಾಫ್ ಆಗಿತ್ತು.
ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್ ಕಳಚಿ ಬೀಳುತ್ತಿರುವ ವೀಡಿಯೋ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟೇಕ್‌ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ 6 ಟೈಯರ್‌ಗಳಲ್ಲಿ ಒಂದು ಕಳಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಮಾನವನ್ನು ಲಾಸ್ ಏಂಜಲೀಸ್‌ನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನದಲ್ಲಿ 235 ಪ್ರಯಾಣಿಕರು ಮತ್ತು 14 ಸಿಬ್ಬಂದಿ ಇದ್ದರು. ಪ್ರಯಾಣಿಕರನ್ನು ಬೇರೊಂದು ವಿಮಾನಕ್ಕೆ ಸ್ಥಳಾಂತರಿಸಿ ಅವರ ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು ಎಂದು ಯುನೈಟೆಡ್ ಏರ್‌ಲೈನ್ಸ್ ತಿಳಿಸಿದೆ. ಬೋಯಿಂಗ್ 777ಗಳ ಎರಡು ಮುಖ್ಯ ಲ್ಯಾಂಡಿಂಗ್ ಗೇರ್‌ಗಳಲ್ಲಿ ತಲಾ 6 ಟೈರ್‌ಗಳನ್ನು ಹೊಂದಿದ್ದು, ಅವುಗಳಲ್ಲಿ ಒಂದು ಕಳಚಿಕೊಂಡಿದೆ ಎನ್ನಲಾಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
United flight UA35 diverted to Los Angeles today after losing a wheel on takeoff…
— Flight Emergency (@FlightEmergency) March 7, 2024