ಮಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದೆ. ಹೀಗಾಗಿ ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ವಿಶ್ವಾಸವಿದೆ. ಕರ್ನಾಟಕ ರಾಜ್ಯದ ಜನತೆ ನರೇಂದ್ರ ಮೋದಿ ಜೊತೆಗಿದ್ದಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಪಡ್ನವಿಸ್ ಹೇಳಿದ್ದಾರೆ.
ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದ ಅವರು ಮಾದ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಎಲ್ಲಾ ರಾಜ್ಯಗಳು ಪ್ರಧಾನಿಗೆ ಬೆಂಬಲ ಕೊಡಲಿದೆ. ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳನ್ನು ಯಾರೂ ಬೆಂಬಲಿಸಬಾರದು. ಯಾವುದೇ ದೇಶ ವಿರೋಧಿ ಘಟನೆಗಳನ್ನು ಆಯಾ ಸರ್ಕಾರಗಳು ಖಂಡಿಸಬೇಕು ಎಂದು ಹೇಳಿದರು. ಹರ್ಯಾಣ ಸಿಎಂ ರಾಜೀನಾಮೆ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಳಿದ ಪ್ರಶ್ನೆಗೆ ಪಕ್ಷದಲ್ಲಿ ಇಂಥದ್ದು ಆಗುತ್ತೆ ಎಂದಷ್ಟೇ ಹೇಳಿದ ಅವರು ಪಕ್ಷ ಟಿಕೆಟ್ ವಿಚಾರದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.