ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್’ಗೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

ಮಂಗಳೂರು(ನವದೆಹಲಿ): ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುತ್ತಿರುವ ಕಾರಣಕ್ಕಾಗಿ ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ನಿಷೇಧಿಸಿದೆ.

ಜೆಕೆಎನ್‌ಎಫ್ ಸದಸ್ಯರು ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕಾಗಿ ಈ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ಜನರಲ್ಲಿ ಅಸಮಾಧಾನದ ಬೀಜ ಬಿತ್ತುತ್ತಾ, ಭದ್ರತೆ ಹಾಗೂ ಸಾರ್ವಭೌಮತೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ನ್ಯಾಷನಲ್ ಫ್ರಂಟ್ ಮೇಲೆ ಐದು ವರ್ಷಗಳ ನಿಷೇಧ ಹೇರಿದೆ. ಆದೇಶದಲ್ಲಿ, ಗೃಹ ಸಚಿವಾಲಯವು ನಯೀಮ್ ಅಹ್ಮದ್ ಖಾನ್ ನೇತೃತ್ವದ ಜೆಕೆಎನ್‌ಎಫ್ ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

 

LEAVE A REPLY

Please enter your comment!
Please enter your name here