ಮಂಗಳೂರು/ಮಣಿಪಾಲ: ಉಡುಪಿ ತಾಲೂಕಿನ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಸಂಭವಿಸಿದ ಅವಘಡದಲ್ಲಿ ಬಸ್ ಮಾಲಕ ಮೃತಪಟ್ಟಿದ್ದಾರೆ.
ಖಾಸಗಿ ಬಸ್ನ ಮಾಲಕ ದಯಾನಂದ ಶೆಟ್ಟಿ(65) ಮೃತಪಟ್ಟವರು. ಇವರು ತಮ್ಮ ಬಸ್ ಅನ್ನು ಗ್ಯಾರೇಜ್ನಲ್ಲಿ ರಿಪೇರಿಗೆ ನೀಡಿದ್ದನ್ನು ನೋಡಲು ಬಂದಿದ್ದರು. ಈ ವೇಳೆ ಅವರು ಬಸ್ನ ಎದುರು ನಿಂತಿದ್ದು ಚಾಲಕ ಬಸ್ ಚಲಾಯಿಸಿದ ಪರಿಣಾಮ ಬಸ್ನ ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.