ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ-ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಪ್ರಕರಣ ದಾಖಲಾಗಿದೆ.  ಸಂತ್ರಸ್ತೆ ಗುರುವಾರ(ಮಾ.14) ಸಂಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಸಂಜೆ 6 ಗಂಟೆ ವೇಳೆಗೆ ಸಂತ್ರಸ್ತರು ಪೊಲೀಸ್‌ ಠಾಣೆಗೆ ದೂರು ನೀಡಲು ತೆರಳಿದ್ದರೂ ರಾತ್ರಿ 12 ಗಂಟೆ ವರೆಗೆ ಎಫ್‌ ಐ ಆರ್‌ ದಾಖಲಾಗಿರಲಿಲ್ಲ. ಸಂತ್ರಸ್ತ ತಾಯಿ, ಮಗಳು ನ್ಯಾಯಕ್ಕಾಗಿ ಪಟ್ಟಿ ಹಿಡಿದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸ್‌ ಮೂಲಗಳ ಪ್ರಕಾರ ಫೆ.2ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ, ಮಗಳು(17) ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here