ಮಂಗಳೂರು(ದೆಹಲಿ): 18ನೇ ಲೋಕಸಭೆ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಟಿ ನಡೆಸಿ ವೇಳಾಪಟ್ಟಿ ಪ್ರಕಟಿಸಿದ್ದು ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಏ.19ರಂದು ನಡೆಯಲಿದ್ದು, ಎರಡನೇ ಹಂತದ ಚುನಾವಣೆ ಏ.26ರಂದು, ಮೂರನೇ ಹಂತದ ಚುನಾವಣೆ ಮೇ.7ರಂದು, ನಾಲ್ಕನೇ ಹಂತದ ಚುನಾವಣೆ ಮೇ.13ರಂದು, ಐದನೇ ಹಂತದ ಚುನಾವಣೆ ಮೇ.20ರಂದು, ಆರನೇ ಹಂತದ ಚುನಾವಣೆ ಮೇ.25ರಂದು ಮತ್ತು ಏಳನೇ ಹಂತದ ಚುನಾವಣೆ ಜೂ.1ರಂದು ನಡೆಯಲಿದೆ. ಏಳು ಹಂತದ ಚುನಾವಣೆ ಮತ ಎಣಿಕೆ ಜೂ.4ರಂದು ನಡೆದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಏ.26 ರಂದು ನೆಡೆಯಲಿದ್ದು, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚುನಾವಣೆ ನಡೆಯಲಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡನೇ ಹಂತದ ಮತದಾನ ಮೇ.7ರಂದು ನಡೆಯಲಿದೆ.