ಮಂಗಳೂರು(ಬೆಂಗಳೂರು): ರಾಜ್ಯ ಸರಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ನೇಮಕಗೊಂಡಿದ್ದಾರೆ.
ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಸದಸ್ಯರಾಗಿ ಪ್ರೊ.ರಾಮಚಂದ್ರಪ್ಪ, ಡಾ.ವಿ.ಪಿ.ನಿರಂಜನಾರಾಧ್ಯ, ಟಿ.ಗುರುರಾಜ್, ಡಾ. ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ವಿರೂಪಣ್ಣ ಕಲ್ಲೂರು ನೇಮಕಗೊಂಡಿದ್ದಾರೆ.