ಮಂಗಳೂರು(ನವದೆಹಲಿ): ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಿ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.
ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳಿಗೆ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ಫಲಿತಾಂಶ ಎರಡು ದಿನ ಮುಂಚಿತವಾಗಿ ಹೊರಬೀಳಲಿದೆ. ಚುನಾವಣಾ ಆಯೋಗದ ಪ್ರಕಾರ, ಮತ ಎಣಿಕೆಯು ಜೂನ್ 4ರ ಬದಲು ಜೂನ್ 2ರಂದು ನಡೆಯಲಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಅವಧಿ ಜೂನ್ 2ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬದಲಾವಣೆ ತರಲಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ಲೋಕಸಭಾ ಕ್ಷೇತ್ರಗಳ ಫಲಿತಾಂಶ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಪ್ರಕಟಣೆ ಹೇಳಿದೆ.