ಮಂಗಳೂರು(ಹೈದರಾಬಾದ್): ಹೈದರಾಬಾದ್ ನ ಮಹಿಳೆಯೊಬ್ಬರು ಮಾ.20ರಂದು ತನ್ನ 19 ವರ್ಷದ ಮಗಳು ತನ್ನ ಗೆಳೆಯನೊಂದಿಗೆ ತಮ್ಮ ಮನೆಯಲ್ಲಿರುವುದನ್ನು ಕಂಡು ಪುತ್ರಿಯನ್ನು ಕೊಂದಿರುವುದಾಗಿ ಇಬ್ರಾಹಿಂಪಟ್ಟಣಂ ಪೊಲೀಸ್ ಅಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗಳು ಭಾರ್ಗವಿ ತನ್ನ ಪ್ರಿಯಕರನೊಂದಿಗೆ ಇದ್ದುದನ್ನು ಜಂಗಮ್ಮ ನೋಡಿದ್ದಾರೆ. ಇದರಿಂದ ಕೋಪಗೊಂಡ ಆಕೆ ಇಬ್ರಾಹಿಂಪಟ್ಟಣದ ತಮ್ಮ ಮನೆಯಲ್ಲಿ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬುಧವಾರ ಜಂಗಮ್ಮ ಕೆಲಸ ಮುಗಿಸಿ ಮನೆಗೆ ಊಟಕ್ಕೆ ಬಂದಿದ್ದು, ಭಾರ್ಗವಿ ತನ್ನ ಪ್ರಿಯಕರನ ಜತೆ ಪತ್ತೆಯಾಗಿದ್ದಾಳೆ. ಇದನ್ನು ನೋಡಿದ ಆಕೆ ಮಗಳ ಪ್ರಿಯಕರನನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ. ಬಳಿಕ ಮಗಳ ಮೇಲೆ ಹಲ್ಲೆ ನಡೆಸಿದ್ದು, ಸೀರೆಯಿಂದ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಅಪ್ರಾಪ್ತ ಸಹೋದರ ತಾಯಿ ಅಕ್ಕನನ್ನು ಕೊಲೆ ಮಾಡುವುದನ್ನು ಕಿಟಕಿಯಿಂದ ನೋಡಿದ್ದು, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಾನೆ.